ಅಮರಾವತಿ(ಮಾ:15): ತೆಲುಗು ಚಿತ್ರರಂಗದ ನಟ ಪವನ್ ಕಲ್ಯಾಣ್ ಅವರ ಜನ ಸೇನಾ ಪಕ್ಷವು ಲೋಕಸಭಾ ಚುನಾವಣೆಗಾಗಿ ತನ್ನ ಪ್ರಣಾಳಿಕೆಯನ್ನು ಪ್ರಕಟಿಸಿದೆ. ವಾರ್ಷಿಕವಾಗಿ 10 ಲಕ್ಷ ಉದ್ಯೋಗ ಸೃಷ್ಟಿ ಹಾಗೂ ಎಲ್ಲರಿಗೂ ಉಚಿತ ಆರೋಗ್ಯ ಸೇವೆ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ.

5 ನೇ ವರ್ಷದ ಜನಸೇನಾ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗುರುವಾರ ರಾಜಮಂಡ್ರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪವನ್ ಕಲ್ಯಾಣ್,ನಮ್ಮ ಪಕ್ಷವು ಅಧಿಕಾರಕೆ ಬಂದರೆ,ರೈತರಿಗೆ ಕೃಷಿಯಲ್ಲಿ ಬಂಡವಾಳ ಹೂಡಲು ವರ್ಷಕ್ಕೆ 8 ಸಾವಿರ ರೂ ಹಾಗೂ 60 ವರ್ಷ ಮೇಲ್ಪಟ್ಟ ರೈತರಿಗೆ 5 ಸಾವಿರ ರೂ ಪಿಂಚಣಿ ನೀಡುತ್ತೇವೆ ಎಂದರು.

ಆಂಧ್ರಪ್ರದೇಶದಲ್ಲಿ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುವುದಾಗಿ ತಿಳಿಸಿದರು. ಅಧಿಕಾರಕ್ಕೆ ಬಂಡ 6 ತಿಂಗಳುಗಳೊಳಗೆ 1 ಲಕ್ಷ ಹಾಗೂ ಒಟ್ಟಾರೆ 10 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಿದರು. ಮಹಿಳೆಯರಿಗೆ ಶಾಸಕಾಂಗದಲ್ಲಿ ಶೇ 33 ರಷ್ಟು ಮೀಸಲಾತಿ,ಮುಸ್ಲಿಂ ಸಮುದಾಯದವರ ಅಭಿವೃದ್ಧಿಗೆ ಸಂಬಂಧಪಟ್ಟಂತಹಾ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಘೋಷಣೆ ಮಾಡಿದರು.