ಶ್ರೀನಗರ(ಮಾ:11): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ಭದ್ರತಾ ಪಡೆ ಮತ್ತು ಜೈಶ್-ಎ-ಮೊಹಮದ್ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದ್ದು,ಎನ್ಕೌಂಟರ್ ನಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಉಗ್ರರ ಮೃತ ದೇಹಗಳನ್ನು ಭದ್ರತಾ ಪಡೆಗಳು ವಶಪಡಿಸಿಕೊಂಡಿದ್ದು ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಟ್ರಾಲ್ ಪಿಂಗ್ಲಿಷ್ ಸುತ್ತಮುತ್ತ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಆಧಾರದಮೇಲೆ ಭದ್ರತಾ ಪದೇ ಶೋಧ ಕಾರ್ಯ ಪ್ರಾರಂಭಿಸಿವೆ.

ಈ ಸಂದರ್ಭದಲ್ಲಿ ಭಯೋತ್ಪಾದಕರು ಸಿಬ್ಬಂದಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ,ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಯಿಂದಲೂ ಗುಂಡಿನ ದಾಳಿ ನಡೆಸಿದ್ದಾರೆ,ಈ ವರೆಗೂ ಮೂವರು ಉಗ್ರರನ್ನು ಸದೆಬಡಿಯಲಾಗಿದೆ ಎನ್ನಲಾಗಿದೆ.