ಬೆಂಗಳೂರು(ಆಗಸ್ಟ್.12) ಕರ್ನಾಟಕದಲ್ಲಿ ಒಟ್ಟಾರೆ 17 ಜಿಲ್ಲೆಗಳ 80 ತಾಲೂಕುಗಳಲ್ಲಿ ಪ್ರವಾಹ ಉಂಟಾಗಿದ್ದು, ಅಪಾರ ಉತ್ತರ ಕರ್ನಾಟಕದಲ್ಲಿ ಹಲವಾರು ಗ್ರಾಮಗಳು ನದಿಗೆ ನೀರುಪಾಲಾಗಿವೆ. ಅದಕ್ಕಾಗಿ ರಾಜ್ಯ ಸರ್ಕಾರ ತುರ್ತಾಗಿ 3 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. “ಎಲ್ಲಾ ಜಿಲ್ಲೆಗಳಲ್ಲಿ ಸೇರಿ ಸುಮಾರು 40 -50 ಸಾವಿರ ಕೋಟಿ ರೂ. ನಷ್ಟವಾಗಿದೆ” ಎಂದು ಹೇಳಿದರು.

ಕೇಂದ್ರ ಸರ್ಕಾರ ತಕ್ಷಣವೇ 3 ಸಾವಿರ ಕೋಟಿ ರೂ. ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದಾರೆ. ರಾಜ್ಯಕ್ಕೆ ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರು ಬಂದು ಪ್ರವಾಹದ ಪರಿಸ್ಥಿತಿಯನ್ನು ವೀಕ್ಷಿಸಿದ್ದು ಕಾರಣ ಹೆಚ್ಚಿನ ನೆರವು ಪಡೆಯಲು ಸಹಕಾರಿಯಾಗಲಿದೆ” ಎಂದರು.

ಪರಿಹಾರ ಕಾರ್ಯದಲ್ಲಿ ದೇವೇಗೌಡರು, ಸಿದ್ಧರಾಮಯ್ಯ ಮತ್ತು ಕುಮಾರಸ್ವಾಮಿ ಪೂರ್ಣ ಸಹಕಾರ ಕೊಟ್ಟಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ. ಬಹಳಷ್ಟು ಪರಿಹಾರ ಸಾಮಾಗ್ರಿ ಕೊಡುವ ದಾನಿಗಳನ್ನು ನೆರೆ ಪೀಡಿತ ಪ್ರದೇಶಗಳಿಗೆ ಕಳುಹಿಸುತ್ತಿದ್ದೇನೆ” ಎಂದು ಹೇಳಿದರು.