ನವದೆಹಲಿ(ನ.13) ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಭೀಕರ ಪ್ರವಾಹದಿಂದಾಗಿ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಅಪಾರ ಪ್ರಮಾಣದ ಬೆಳೆ, ಆಸ್ತಿ, ಮನೆಗಳೆಲ್ಲಾ ಕೊಚ್ಚಿಹೋಗಿದ್ದು, ಅವುಗಳಿಗೆ ಪರಿಹಾರವಾಗಿ ಕೇಂದ್ರ ಸರ್ಕಾರವು 577.84 ಕೋಟಿ ರೂಪಾಯಿ ಹಣವನ್ನು ಪರಿಹಾರವಾಗಿ ನೀಡಿದೆ.

ರಾಜ್ಯದಲ್ಲಿ ಮಳೆಯಿಂದಾಗಿ ಹಲವು ಕಡೆ ಭೂಕುಸಿತ ಉಂಟಾಗಿ ಕೆಲವು ಜನ ಜಾನುವಾರುಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರದ ಗೃಹ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಉನ್ನತ ಮಟ್ಟದ ಸಮಿತಿಯ ಸಭೆಯಲ್ಲಿ ಚರ್ಚೆ ನಡೆಸಿದ ಬಳಿಕ, ಕರ್ನಾಟಕ ಹೊರತುಪಡಿಸಿ ಇತರ ಐದು ರಾಜ್ಯಗಳಿಗೂ ನೈಸರ್ಗಿಕ ವಿಕೋಪ ಪರಿಹಾರ ಒದಗಿಸಲು ನಿರ್ಧರಿಸಿದ್ದಾರೆ.

ಈಗಾಗಲೇ ಎಲ್ಲಾ 28 ರಾಜ್ಯಗಳಿಗೆ ಪ್ರಸಕ್ತ ಸಾಲಿನ ರಾಜ್ಯಗಳ ನೈಸರ್ಗಿಕ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್‌) ಅಡಿ ಒಟ್ಟು 15,524.43 ಕೋಟಿ ಪರಿಹಾರವನ್ನು ಒದಗಿಸಲಾಗಿದೆ.