ನವದೆಹಲಿ(ಜ:12): ಆಮ್ ಆದ್ಮಿ ಪಕ್ಷದ ನಾಯಕಿ ಮತ್ತು ಆರ್ ಬಿ ಎಸ್ ನ ಮಾಜಿ ಸಿಇಒ ಮೀರಾ ಸನ್ಯಾಲ್ ಶುಕ್ರವಾರ ರಾತ್ರಿ ನಿಧನರಾಗಿದ್ದಾರೆ.

ಕೇರಳದ ಕೊಚ್ಚಿ ಮೂಲದ ಸನ್ಯಾಲ್ ರಾಯಲ್ ಬ್ಯಾಂಕ್ ಆಫ್ ಸ್ಕಾಟ್ಲೆಂಡ್ ನ ಸಿಇಒ ಹುದ್ದೆಯನ್ನು ತೊರೆದು 2014ರಲ್ಲಿ ಆಮ್ ಆದ್ಮಿ ಪಕ್ಷದಿಂದ ಮುಂಬೈ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತಿದ್ದರು.

ಎಬಿಎಸ್ ಮತ್ತು ಎಬಿಎನ್ ಬ್ಯಾಂಕ್ ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದು,ಇದೀಗ ಸನ್ಯಾಲ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು, ಶುಕ್ರವಾರದಂದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಸನ್ಯಾಲ್ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.