ಶಿವಮೊಗ್ಗ:(ಜ23): ಮಂಗನ ಕಾಯಿಲೆಯನ್ನು ನಿಯಂತ್ರಿಸುವಲ್ಲಿ ವಿಫಲರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾಕ್ಟರ್ ಬಿ.ಸಿ ವೆಂಕಟೇಶ್ ಮತ್ತು ಪರಮಾಣು ಕ್ರಿಮಿ ಸಂಶೋಧನಾ ಕೇಂದ್ರದ ಉಪನಿರ್ದೇಶಕ ಡಾಕ್ಟರ್ ರವಿಕುಮಾರ್ ಅವರನ್ನು ಅಮಾನತು ಮಾಡಿ ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಮಂಗನ ಕಾಯಿಲೆಯು ತೀವ್ರ ಸ್ವರೂಪ ಪಡೆದಿದೆ. ಹಾಗೆಯೆ ಅನೇಕರು ಪ್ರಾಣವನ್ನು ಬಿಟ್ಟಿದ್ದಾರೆ.

ಇನ್ನು ಈ ಮಂಗನ ಕಾಯಿಲೆ ಹೆಚ್ಚು ಹರಡದಂತೆ ನೋಡಿಕೊಳ್ಳಲು ಸರಿಯಾದ ಯೋಜನೆಯನ್ನು ರೂಪಿಸದೆ ಇರುವುದು ಹಾಗೂ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿಲ್ಲ ಎನ್ನುವ ಸಲುವಾಗಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.