ಬೆಂಗಳೂರು(ಜೂನ್.11) ಕನ್ನಡದ `ಆಪರೇಷನ್ ಅಲಮೇಲಮ್ಮ’ ಮತ್ತು `ಕವಲುದಾರಿ’ಯಂತ ಹಿಟ್ ಸಿನಿಮಾ ನೀಡಿದ ನಟ ರಿಷಿ ಈಗ ಸದ್ದಿಲ್ಲದೆ ಮತ್ತೊಂದು ಸಿನಿಮಾ ಮಾಡಿ ಮುಗಿಸಿದ್ದಾರೆ. ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ನಲ್ಲಿದೆ ಚಿತ್ರತಂಡ.

ನಟ ರಿಷಿ ಅಭಿನಯದ ಈ ಚಿತ್ರಕ್ಕೆ `ಸಕಲಕಲಾವಲ್ಲಭ’ ಎಂದು ಟೈಟಲ್ ಫಿಕ್ಸ್ ಮಾಡಲಾಗಿದೆ. ಅಂದಹಾಗೆ ಈ ಚಿತ್ರವನ್ನು ಪೃಥ್ವಿ, ಚಂಬಲ್, ನಂತಹ ಹಿಟ್ ಸಿನಿಮಾವನ್ನು ನೀಡಿದ ಜಾಕೋಬ್ ವರ್ಗೀಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈಗಾಗಲೇ ಸದ್ದಿಲ್ಲದೆ ಸಿನಿಮಾ ಚಿತ್ರೀಕರಣ ಮಾಡಿ ಮುಗಿಸಿದ್ದು, ಪೋಸ್ಟ್ ಪ್ರೊಡಕ್ಷನ್ ನಲ್ಲಿ ಬ್ಯುಸಿಯಾಗಿದೆ ಚಿತ್ರತಂಡ.

ಸದ್ಯದಲ್ಲೇ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಲಿದೆ ಚಿತ್ರತಂಡ. ಇನ್ನು ಈ ಚಿತ್ರದಲ್ಲಿ ನಟ ಸಾಯಿಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ರಿಷಿಗೆ ನಾಯಕನಟಿಯಾಗಿ ಮಲಯಾಳಂ ನಟಿ ನಿವೀನ್ ಪೌಲಿ ನಟಿಸಲಿದ್ದು, ಮೊದಲ ಬಾರಿಗೆ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರೆ.

ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿದ್ದ ನಟ ರಿಷಿ `ಸಕಲಕಲಾವಲ್ಲಭ’ ಚಿತ್ರದಲ್ಲಿ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ಕುತೂಹಲಕಾರಿ ಸಂಗತಿಯಾಗಿದೆ.