ದಾವಣಗೆರೆ(ಜ:10): ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.ಜಿಲ್ಲಾ ಪಂಚಾಯಿತಿ ಅಧಿಸೂಚನೆ ಹಾಗೂ ಗ್ಯಾಜೆಟ್ ನೋಟಿಫಿಕೇಶನ್ ತಲುಪಿದ ಬಳಿಕ ಮಧ್ಯರಾತ್ರಿ 12 ಘಂಟೆಗೆ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿದೆ.

1997 ರಿಂದ ದಾವಣಗೆರೆ ಜಿಲ್ಲೆಯ ಭಾಗವಾಗಿದ್ದ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಬೇಕೆಂದು ಹೋರಾಟ ನಡೆಯುತ್ತಿತ್ತು. ಇದೀಗ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ .

ಹರಪನಹಳ್ಳಿ ರಾಜ್ಯದ 3ನೇ ಅತಿ ಹಿಂದುಳಿದ ತಾಲೂಕು,ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಿರುವುದರಿಂದ ಹರಪನಹಳ್ಳಿ ತಾಲೂಕಿಗೆ ವಿಶೇಷ ಸ್ಥಾನಮಾನ ಲಭ್ಯವಾಗಲಿದೆ ಎಂದು ಪ್ರೊ. ನಂಜುಂಡಪ್ಪ ವರದಿಯಲ್ಲಿ ತಿಳಿಸಿದ್ದಾರೆ.