ಬೆಂಗಳೂರು(ಜುಲೈ.01) ವಿಜಯನಗರ ಶಾಸಕ ಆನಂದ ಸಿಂಗ್ ರಾಜೀನಾಮೆಯ ಬೆನ್ನಲ್ಲೇ ಕಾಂಗ್ರೆಸ್ ನ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆಯನ್ನು ನೀಡಿದ್ದಾರೆ.

ಬೆಳಗಾವಿ ಗೋಕಾಕ್ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿ ಕೈ ಬರಹದ ಮೂಲಕ ತಮ್ಮ ರಾಜೀನಾಮೆ ಪತ್ರವನ್ನು ಬರೆದು ಸ್ಫೀಕರ್ ಗೆ ಪತ್ರವನ್ನು ರವಾನಿಸಿದ್ದಾರೆ.

ಸ್ವ ಇಚ್ಛೆಯಿಂದ ನಾನು ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ. 5 ಬಾರಿ ಗೋಕಾಕ್ ನಿಂದ ಗೆಲುವನ್ನು ಸಾಧಿಸಿದ್ದ ರಮೇಶ್ ಜಾರಕಿಹೊಳಿ.