ಲಂಡನ್(ಜೂ,20): ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಲಂಡನ್ ನಲ್ಲಿ ತಮ್ಮ ಪತ್ನಿ, ನಟಿ ಅನುಷ್ಕಾ ಶರ್ಮಾ ಜೊತೆ ಬೈಸಿಯಾಗಿದ್ದು, ಅವರು ಬೀದಿಯಲ್ಲಿ ಸುತ್ತಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಲಂಡನ್‍ನ ಬೀದಿಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ ಅನುಷ್ಕಾ ಮೆರೂನ್ ಹಾಗೂ ಬಿಳಿ ಬಣ್ಣದ ಉಡುಪು ಧರಿಸಿದ್ದು, ವಿರಾಟ್ ಜ್ಯಾಕೇಟ್ ಧರಿಸಿದ್ದರು. ವಿರುಷ್ಕಾ ಅಭಿಮಾನಿಗಳು ಈ ಫೋಟೋ ಹಾಕಿ ಅದಕ್ಕೆ ಲಂಡನನ ಓಲ್ಡ್ ಬಾಂಡ್ ಸ್ಟ್ರೀಟ್, ಅನುಷ್ಕಾ, ವಿರಾಟ್ ಎಂದು ಬರೆದು ಪೋಸ್ಟ್ ಹಾಕಿದ್ದಾರೆ.

ಅನುಷ್ಕಾ ಶರ್ಮಾ ಕೊನೆಯದಾಗಿ ಬಾಲಿವುಡ್ ಬಾದಶಾ ಶಾರೂಖ್ ಖಾನ್ ನಟಿಸಿದ `ಝೀರೋ ಚಿತ್ರದಲ್ಲಿ ನಟಿಸಿದ್ದರು. ಈ ಚಿತ್ರದ ನಂತರ ಅವರು ಬೇರೆ ಯಾವ ಚಿತ್ರ ಕೂಡ ಒಪ್ಪಿಕೊಂಡಿಲ್ಲ. ಸದ್ಯ ಅನುಷ್ಕಾ ಡಿಜಿಟಲ್ ವೇದಿಕೆಯಲ್ಲಿ ಯಾವುದಾದರೂ ಶೋ ಮಾಡಬೇಕು ಎಂದುಕೊಂಡಿದ್ದಾರೆ.

ಭಾರತ ತಂಡ ಭಾನುವಾರ ನಡೆದ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಡಕ್ವರ್ಥ್ ಲೂಯಿಸ್ ನಿಯಮದನ್ವಯ 89 ರನ್‍ಗಳ ಭರ್ಜರಿ ಗೆಲುವು ಸಾಧಿಸಿತು. ಇದುವರೆಗೂ ನಡೆದ 4 ಪಂದ್ಯದಲ್ಲಿ ಭಾರತ ಮೂರರಲ್ಲಿ ಗೆಲುವು ಸಾಧಿಸಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದು ಆಗಿತ್ತು.