ಬೆಂಗಳೂರು:(ಜೂನ್.17): ವೈದ್ಯರ ಮೇಲಿನ ಹಲ್ಲೆಯನ್ನು ಖಂಡಿಸಿ ದೇಶದಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಕರ್ನಾಟಕದಲ್ಲಿಯೂ ವೈದ್ಯರು ಪ್ರತಿಭಟನೆಗೆ ಮುಂದಾಗಿದ್ದರಿಂದ ಆಸ್ಪತ್ರೆಗೆ ಬಂದ ರೋಗಿಗಳು ಪರದಾಡುವ ಸ್ಥಿತಿ ಬಂದೊದಗಿದೆ. ಇದರಿಂದ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಸಿಎಂ ಸೂಚನೆ ನೀಡಿದ್ದಾರೆ.

ರಾಜ್ಯದಾದ್ಯಂತ ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಹೊರ ರೋಗಿ ಸೇವೆ ಬಂದ್ ಆಗಿರುವ ಹಿನ್ನೆಲೆಯಲ್ಲಿ ರೋಗಿಗಳು ಪರದಾಡುವ ಸ್ಥಿತಿ ಬಂದೊದಗಿದೆ. ಇನ್ನೂ ವೈದ್ಯರ ಮುಷ್ಕರದ ಕುರಿತು ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ವೈದ್ಯರ ಮೇಲಾಗುತ್ತಿರುವ ಹಲ್ಲೆ ಖಂಡನೀಯ, ವೈದ್ಯರ ಪ್ರತಿಭಟನೆಯಿಂದಾಗಿ ರೋಗಿಗಳಿಗೆ ತೊಂದರೆ ಉಂಟಾಗಿ ಪರದಾಡುವ ಸ್ಥಿತಿ ಬಂದೊದಗಿದೆ. ಈ ಮುಷ್ಕರವನ್ನು ನಿರ್ಬಂಧಿಸಿ ಸರ್ಕಾರವು 3 ದಿನಗಳ ಹಿಂದೆಯೇ ಸತ್ತೋಲೆಯನ್ನು ಹೊರಡಿಸಲಾಗಿದ್ದು, ಇದರಿಂದ ರಾಜ್ಯ ಸರ್ಕಾರಿ ವೈದ್ಯರು ಕೂಡಲೇ ಕರ್ತವ್ಯಕ್ಕೆ ಹಾಜರಾಗ ಬೇಕೆಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.