ಜಪಾನ್ (ಜೂನ್.29); ಭಾರತದ ಪ್ರಧಾನಿ ನರೇಂದ್ರ ಮೋದಿ ಜೊತೆಗೆ ಶನಿವಾರ ಬೆಳಗ್ಗೆ ಸೆಲ್ಫಿ ಕ್ಲಿಕ್ಕಿಸಿರುವ ಆಸ್ಟ್ರೇಲಿಯಾದ ಪ್ರಧಾನಿ ಸ್ಕಾಟ್ ಮಾರಿಸನ್ ಪೋಟೋವನ್ನು ಟ್ವೀಟ್ ಮಾಡಿದ್ದು ಅದರಲ್ಲಿ ಕಿತ್ನಾ ಅಚ್ಚಾ ಹೈ ಮೋದಿ ಎಂದು ಹಿಂದಿಯಲ್ಲಿ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಜಪಾನ್‍ನಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ಜಿ-20 ಶೃಂಗ ಸಭೆಯಲ್ಲಿ ವಿಶ್ವದ ಬಲಿಷ್ಠ ಆರ್ಥಿಕತೆ ಹೊಂದಿರುವ 20 ರಾಷ್ಟ್ರಗಳ ನಾಯಕರು ಪಾಲ್ಗೊಂಡಿದ್ದಾರೆ. ಈ ಸಭೆಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಹಾಗೂ ಭಾರತದ ಪ್ರಧಾನಿ ನರೇಂದ್ರ ಮೋದಿ ಸಹ ಭಾಗವಹಿಸಿದ್ದಾರೆ.

ಈ ವೇಳೆ ಮೋದಿ ಜೊತೆಗೆ ಸೆಲ್ಫಿ ಕ್ಲಿಕ್ಕಿಸಿರುವ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಆ ಪೋಟೋವನ್ನು ಟ್ವೀಟ್ ಮಾಡಿದ್ದಾರೆ. ಅಲ್ಲದೆ ಕಿತ್ನಾ ಅಚ್ಚಾ ಹೈ ಮೋದಿ ಎಷ್ಟು ಒಳ್ಳೆಯವರು ಎಂದು ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ನರೇಂದ್ರ ಮೋದಿ ಲೋಕಸಭೆ ಚುನಾವಣೆಯಲ್ಲಿ ಅಭುತಪೂರ್ವ ಗೆಲುವು ಸಾಧಿಸಿದ ಸಂದರ್ಭದಲ್ಲಿ ಕರೆ ಮಾಡಿದ್ದ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್ ಎರಡನೇ ಬಾರಿ ಪ್ರಧಾನಿಯಾಗಿ ಆಯ್ಕೆಯಾದ ಮೋದಿಯವರಿಗೆ ಶುಭಾಶಯಗಳನ್ನು ತಿಳಿಸಿದ್ದರು.