ಬೆಂಗಳೂರು(ಜೂ.03): ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ನೂತನ ರಾಜ್ಯ ರೈಲ್ವೇ ಸಚಿವರಾದ ಸುರೇಶ್ ಅಂಗಡಿ ರೈಲಿನಲ್ಲಿ ಸಂಚರಿಸಿ ಪ್ರಯಾಣಿಕರ ಸಮಸ್ಯೆ ಅಲಿಸಿದ್ದಾರೆ.

ಇಂದು ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿದ ಸುರೇಶ್ ಅಂಗಡಿಯವರು, ಆ ರೈಲು ನಿಲ್ದಾಣದ ಆಡಳಿತ ವ್ಯವಸ್ಥೆ ಮತ್ತು ಕುಂದು ಕೊರೆತಗಳ ಬಗ್ಗೆ ಪರಿಶೀಲನೆ ಮಾಡಿ. ಅಲ್ಲಿನ ರೈಲ್ವೇ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಇನ್ನು ನಿಲ್ದಾಣದಲ್ಲಿ ಅಭಿವೃದ್ಧಿ ಕೆಲಸಗಳ ಕುರಿತು ಮಾಹಿತಿ ಪಡೆದ ಅಂಗಡಿ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಒದಗಿಸುವುದಾಗಿ ತಿಳಿಸಿದರು.

ಸೋಮವಾರ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ರಾಣಿ ಚೆನ್ನಮ್ಮ ಎಕ್ಸ್‍ಪ್ರೆಸ್ ರೈಲಿನಲ್ಲಿ ಪ್ರಯಾಣ ಮಾಡಿ ಪ್ರಯಾಣಿಕರ ಸಮಸ್ಯೆಗಳನ್ನು ಅಲಿಸಿದ್ದಾರೆ. ಎಲ್ಲಾ ಸಮಸ್ಯೆಗಳಿಗೂ ಆದಷ್ಟೂ ಬೇಗ ಪರಿಹಾರ ನೀಡುತ್ತೇವೆ ಎಂದು ಪ್ರಯಾಣಿಕರಿಗೆ ಭರವಸೆ ನೀಡಿದ್ದಾರೆ.