ದಾವಣಗೆರೆ(ಏ:04): ರಾಜ್ಯದಲ್ಲಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದ್ದೇ ಅಪರಾಧ, ಅವರಿಗೆ ಅಧಿಕಾರದ ಮದ ಹೆಚ್ಚಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಈಗ ನಿಖಿಲ್ ಎಲ್ಲಿದೀಯಪ್ಪ ಎನ್ನುವ ಟ್ರೆಂಡ್ ಹೆಚ್ಚಾಗಿದೆ, ಈ ಚುನಾವಣೆಯ ಬಳಿಕ ಕುಮಾರಸ್ವಾಮಿ ಎಲ್ಲಿದೀಯಪ್ಪ ಎಂದು ನಾವು-ನೀವೆಲ್ಲಾ ಹುಡುಕಬೇಕಾಗುತ್ತದೆ.ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಹಾಸನದಲ್ಲಿ ಐದು ಕಾಮಗಾರಿಗಳು ಪೂರ್ಣಗೊಳ್ಳುವ ಮೊದಲೇ ರಾಜ್ಯ ಸರ್ಕಾರ ಗುತ್ತಿಗೆದಾರರಿಗೆ ಮುಂಗಡವಾಗಿ 1,344 ಕೋಟಿಯನ್ನು ಬಿಡುಗಡೆ ಮಾಡಿದೆ, ಹಣವನ್ನು ಲೋಕಸಭಾ ಚುನಾವಣೆಗೆ ಬಳಸಿಕೊಳ್ಳುವ ಸಲುವಾಗಿಯೇ ಈ ರೀತಿ ಮಾಡಿದ್ದಾರೆ, ಎಂದು ಆರೋಪಿಸಿದ್ದಾರೆ.

ದಾವಣಗೆರೆಯಲ್ಲಿ ಸಿದ್ದೇಶ್ವರ ಅವರು ಈಗಾಗಲೇ ಗೆದ್ದಾಗಿದೆ. ಎಷ್ಟು ಲಕ್ಷ ಮತಗಳ ಅಂತರದಲ್ಲಿ ಎಂಬುದನ್ನು ಲೆಕ್ಕ ಮಾಡಬೇಕು ಅಷ್ಟೇ. ರಾಜ್ಯದಲ್ಲಿ ಬಿಜೆಪಿ 22 ಸ್ಥಾನಗಳಲ್ಲಿ ಗೆಲುವು ಸಾಧಿಸುವುದು ನಿಶ್ಚಿತ. ದೇಶದಲ್ಲಿ ಬಿಜೆಪಿ ಸ್ವಂತ ಬಲದ ಮೇಲೆ 300 ಸ್ಥಾನ ಗಳಿಸಲಿದೆ. ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ’ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.