ಬೆಂಗಳೂರು(ಫೆ:11): ಕರ್ನಾಟಕದ ಬಿಜೆಪಿ ಘಟಕದೊಳಗೆ ನಡೆಯುತ್ತಿರುವ ವಿದ್ಯಮಾನಗಳಿಂದ ಅಸಮಾಧಾನಗೊಂಡಿರುವ ಕೇಂದ್ರದ ನಾಯಕರು ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ನಿಲ್ಲಿಸಿ ಲೋಕಸಭಾ ಚುನಾವಣೆಯತ್ತ ಗಮನಹರಿಸುವಂತೆ ಸೂಚಿಸಿದ್ದಾರೆ.ಶಾಸಕರ ಪುತ್ರನಿಗೆ ಬಿ.ಎಸ್ ಯಡಿಯೂರಪ್ಪ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲು ಆಮಿಷವೊಡ್ಡಿರುವುದು ಆಡಿಯೋ ರೆಕಾರ್ಡ್ ನಲ್ಲಿ ಬಹಿರಂಗವಾಗಿತ್ತು,ಇದನ್ನು ಯಡಿಯೂರಪ್ಪ ಒಪ್ಪಿಕೊಂಡಿರುವುದರಿಂದ ರಾಷ್ಟ್ರೀಯ ನಾಯಕರು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ .

ಇದೀಗ ಪಕ್ಷಕ್ಕೆ ಆಗುತ್ತಿರುವ ಹಾನಿಯನ್ನು ತಪ್ಪಿಸಲು,ದೋಸ್ತಿ ಸರ್ಕಾರ ಅಸ್ಥಿರಗೊಳಿಸುವ ಯಾವುದೇ ಪ್ರಯತ್ನಕ್ಕೆ ಕೈ ಹಾಕದೇ,ಲೋಕಸಭಾ ಚುನಾವಣೆಯ ವರೆಗೂ ಇಂತಹ ಪ್ರಯತ್ನ ಮಾಡಬಾರದು ಎಂದು ಕೇಂದ್ರದ ನಾಯಕರು ಕಟ್ಟುನಿಟ್ಟಾಗಿ ಸೂಚಿಸಿದ್ದಾರೆ.ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಬಿಜೆಪಿ ಪಕ್ಷಕ್ಕೆ ಮುಜುಗರ ತಂದಿದೆ,ಶಾಸಕನ ಪುತ್ರನ ಜೊತೆ ಪ್ರಧಾನಮಂತ್ರಿ,ರಾಷ್ಟ್ರೀಯ ಅಧ್ಯಕ್ಷರು,ನ್ಯಾಯಾಧೀಶರು,ಮಹಾರಾಷ್ಟ್ರದ ಮುಖ್ಯಮಂತ್ರಿ ಸೇರಿದಂತೆ ಮತ್ತಿತರ ಹೆಸರುಗಳನ್ನು ಹೇಳಲಾಗಿದ್ದು,ಈ ಬೆಳವಣಿಗೆಗಳು ಪಕ್ಷಕ್ಕೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

ಪ್ರಧಾನಮಂತ್ರಿ ರಾಜ್ಯಕ್ಕೆ ಬರುವ ಸಂದರ್ಭದಲ್ಲಿ ಇಂತಹಾ ಪ್ರಸಂಗ ನಡೆದಿರುವುದು ನಿಜಕ್ಕೂ ಮುಜುಗರವೇ ಸರಿ,ಕೇಂದ್ರದಲ್ಲಿ ನಾವು ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸುತ್ತಿದ್ದೇವೆ,ಮುಂದಿನ ಬಾರಿ ಅಧಿಕಾರಕ್ಕೆ ಬರಲು ನಮ್ಮದೇ ಆದ ತಂತ್ರಗಳನ್ನು ರೂಪಿಸಿದ್ದೇವೆ,ಈ ಸಂದರ್ಭದಲ್ಲಿ ನೀವು ಸರಿಯಾದ ಕಾರ್ಯತಂತ್ರವನ್ನು ರೂಪಿಸಲಿಲ್ಲ,ಶಾಸಕರನ್ನೂ ಹಿಂದಿಟ್ಟುಕೊಳ್ಳಲು ಸಾಧ್ಯವಾಗಲಿಲ್ಲ,ಲೋಕಸಭಾ ಚುನಾವಣೆ ಸಮೀಪದಲ್ಲಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದರೆ ಜನತೆ ನಮ್ಮ ಪಕ್ಷದ ಮೇಲೆ ನಂಬಿಕೆ ಕಳೆದುಕೊಳ್ಳುತ್ತಾರೆ,ಇನ್ನು ಮುಂದಾದರೂ ಇಂತಹಾ ಆಟಗಳಿಗೆ ಕಡಿವಾಣ ಹಾಕಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡು ಹೋಗಲು ಸಲಹೆ ನೀಡಿದ್ದಾರೆ .