ನವದೆಹಲಿ(ಜ.17): ಲೋಕಸಭೆ ಚುನಾವಣೆ ಕಾವು ದೇಶದಾಂದ್ಯತ ಜೋರಾಗಿದೆ. ಆದರೆ ಬಿಜೆಪಿಯ ಕೇಂದ್ರ ನಾಯಕರು ಮಾತ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ.

ಹೌದು ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ಅಮೇರಿಕಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಇತ್ತ ಹೆಚ್1 ಎನ್1 ಸೋಂಕಿನಿಂದಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಷಯವನ್ನು ಟ್ವೀಟ್ ಮೂಲಕ ತಿಳಿಸಿರುವ ಅಮಿತ್ ಶಾ, “ನಾನು ಹೆಚ್1 ಎನ್1 ಸೋಂಕು ತಗಲಿರುವ ಕಾರಣ ಚಿಕೆತ್ಸೆ ಪಡೆಯುತ್ತಿದ್ದೇನೆ. ದೇವರ ದಯೆಯಿಂದ, ನಿಮ್ಮ ಪ್ರೀತಿ ಮತ್ತು ಹಾರೈಕೆಯಿಂದ ಶೀಘ್ರ ಗುಣಮುಖನಾಗಲಿದ್ದೇವೆ” ಎಂದು ಹೇಳಿದ್ದಾರೆ.

ರಾತ್ರಿ ಸುಮಾರು ಒಂಬತ್ತು ಗಂಟೆಗೆ ಎದೆ ಬಿಗಿತ ಮತ್ತು ಉಸಿರಾಟದ ತೊಂದರೆಯಿಂದಾಗಿ ಅಮಿತ್ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

ಇನ್ನು ಗೃಹ ಸಚಿವ ರಾಜನಾಥ್ ಸಿಂಗ್ ಅಮಿತ್ ಭಾಯ್ ನೀವು ಶೀಘ್ರವೇ ಗುಣಮುಖರಾಗುವಂತೆ ಈಶ್ವರನಲ್ಲಿ ನಾನು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.