ಕಲಬುರ್ಗಿ (ಫೆ.22): ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಗುರುಮಿಟ್ಕಲ್ ಶಾಸಕ ನಾಗನಗೌಡ ಪಾಟೀಲ್ ಅವರ ಮಗ ಶರಣುಗೌಡ ಅವರಿಗೆ ಆಮಿಷವೊಡ್ಡಿದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣುಗೌಡ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕಲಬುರ್ಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿಗಳು ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠ ಬಿಎಸ್‍ವೈ ವಿರುದ್ಧ ಸಲ್ಲಿಕೆಯಾಗಿದ್ದ ಎಫ್‍ಐಆರ್‍ಗೆ ಮಧ್ಯಂತರ ತಡೆ ನೀಡಿದೆ.

ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶರಣುಗೌಡ ಪೊಲೀಸರಿಗೆ ದೂರು ನೀಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕಲಬುರ್ಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿಗಳು ಇಂದಿಗೆ ತೀರ್ಪು ಕಾಯ್ದಿರಿಸಿದ್ದರು. ಪ್ರಕರಣ ರದ್ದು ಕೋರಿ ಬಿ.ಎಸ್ ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಇಂದು ಈ ಬಗ್ಗೆ ವಿಚಾರಣೆ ನಡೆಸಿದ ಏಕಸದಸ್ಯ ನ್ಯಾಯಪೀಠ ಬಿಎಸ್‍ವೈ ವಿರುದ್ಧ ಸಲ್ಲಿಕೆಯಾಗಿದ್ದ ಎಫ್‍ಐಆರ್‍ಗೆ ಮಧ್ಯಂತರ ತಡೆ ನೀಡಿದೆ.

ಒಟ್ಟಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯಕ್ಕೆ ಬಿ.ಎಸ್. ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ ಸಿಕ್ಕಿದೆ.