ಬಾಗಲಕೋಟೆ (ಜೂನ್.07); ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಇಂದಿನಿಂದ ರಾಜ್ಯಾದ್ಯಂತ ಬರ ಅಧ್ಯಯನಕ್ಕೆ ಪ್ರವಾಸ ಹೊರಟಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರ ಕ್ಷೇತ್ರವಾದ ಬಾಗಲಕೋಟೆಯಿಂದಲೇ ತಮ್ಮ ಪ್ರವಾಸ ಆರಂಭಿಸಲಿದ್ದಾರೆ.

ಈ ವರ್ಷ ರಾಜ್ಯದಲ್ಲಿ ಇಂದೆಂದೂ ಕಾಣದಂತಹ ಬರದ ಪರಿಸ್ಥಿತಿ ಎದುರಾಗಿದೆ. ರಾಜ್ಯ ಸರ್ಕಾರಕ್ಕೆ ಬರವನ್ನು ಎದುರಿಸುವುದೇ ದೊಡ್ಡ ಸವಾಲಾಗಿದೆ. ಈ ನಡುವೆ ವಿರೋಧ ಪಕ್ಷದ ನಾಯಕನಾಗಿ ಬಿ.ಎಸ್?. ಯಡಿಯೂರಪ್ಪನವರೂ ಇಂದಿನಿಂದ ಬರ ಪ್ರವಾಸ ಆರಂಭಿಸಿದ್ದಾರೆ ಎಂದು ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾg

ಬೆಳಗ್ಗೆ 11 ಗಂಟೆಗೆ ಮುಷ್ಠಿಗೆರೆಯಿಮದ ಬಿಎಸ್‍ವೈ ತನ್ನ ಬರ ಅಧ್ಯಯನ ಪ್ರವಾಸವನ್ನು ಆರಂಭಿಸಲಿದ್ದಾರೆ. ಬಳಿಕ ಮಧ್ಯಾಹ್ನ ಬಾದಾಮಿಯಲ್ಲಿ ಬರದ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.