ಕುಣಿಗಲ್(ಡಿ:೨೯): ಕುಣಿಗಲ್ ತಾಲೂಕಿನ ಆಲಪ್ಪನ ಗುಡ್ಡೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನಜಾವ ಖಾಸಗಿ ಬಸ್ ನಿಂತ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ೩೦ ಮಂದಿ ಗಾಯಗೊಂಡಿದ್ದು ಮೂವರ ಸ್ಥಿತಿ ಗಂಭೀರವಾಗಿದೆ.

ಅಪಘಾತದ ರಭಸಕ್ಕೆ ಬಸ್ ಚಾಲಕನ ಎರಡೂ ಕಾಲುಗಳು ತುಂಡಾಗಿದ್ದು ,ಅಪಘಾತದಲ್ಲಿ ಗಾಯಗೊಂಡಿದ್ದ ಪ್ರಯಾಣಿಕರನ್ನು ಹಾಗೂ ಚಾಲಕನನ್ನು ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಜನರು ರಕ್ಷಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆಯ ಕುರಿತು ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಪರಿಶೀಲನೆ ನಡೆಸಿದ್ದಾರೆ.