ತುಮಕೂರು:(ಫೆ19): ಶಾಸಕ ಸಿ.ಟಿ.ರವಿ ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಊರ್ಕೇನ ಹಳ್ಳಿ ಹತ್ತಿರದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ.

ಚಿಕ್ಕಮಗಳೂರಿನ ಶಾಸಕ ಸಿ.ಟಿ ರವಿಯವರು ಪ್ರಯಾಣಿಸುತ್ತಿದ್ದ ಕಾರು, ರಸ್ತೆ ಪಕ್ಕದಲ್ಲಿ ಮೂತ್ರ ವಿಸರ್ಜನೆಗಾಗಿ ಕಾರು ನಿಲ್ಲಿಸಿ ಹೋಗಿದ್ದ ಸ್ನೇಹಿತರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸುನಿಲ್ ಗೌಡ ಹಾಗೂ ಶಶಿಕುಮಾರ್ ಮೃತಪಟ್ಟವರೆಂದು ತಿಳಿದುಬಂದಿದೆ.

ಸ್ನೇಹಿತರು ದೇವಸ್ಥಾನದ ಪ್ರವಾಸ ಮುಗಿಸಿ ಹೋಗುವ ವೇಳೆ ಈ ಘಟನೆ ಸಂಭವಿಸಿದ್ದು, ಇನ್ನು ಈ ಘಟನೆಯಲ್ಲಿ ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶಾಸಕರಾದ ಸಿ.ಟಿ ರವಿ ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಂಗಳೂರಿನ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುತ್ತಾರೆ. ಈ ಘಟನೆಗೆ ಸಂಬಂಧಿಸಿದ ಪ್ರಕರಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.