ನವದೆಹಲಿ(ಜ.25) : ಹರಿಯಾಣ ಮಾಜಿ ಮುಖ್ಯಮಂತ್ರಿ ಭೊಪೇಂದ್ರ ಸಿಂಗ್ ಹೂಡಾ ಮನೆ ಮೇಲೆ ಸಿಬಿಐ ಅಧಿಕಾರಿಗಳು ಇಂದು ಬೆಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಇಂದು ಬೆಳಗ್ಗೆ 8.30ಕ್ಕೆ ರೋಹ್ಟಕದಲ್ಲಿನ ಮಾಜಿ ಮುಖ್ಯಮಂತ್ರಿಗಳ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಈ ವೇಳೆ ಹೂಡಾ ಮನೆಯಲ್ಲಿಯೇ ಇದ್ದರು ಎನ್ನಲಾಗಿದೆ. ಭೂ ಹಂಚಿಕೆ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದೆಹಲಿ ಹಾಗೂ 30 ವಿವಿಧ ಸ್ಥಳಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದು, ಖಾಸಗಿ ಬಿಲ್ಡರ್ ಗಳಿಗೆ ಅತೀ ಕಡಿಮೆ ಬೆಲೆಗೆ ಈ ಭೂಮಿಯನ್ನು ಮಾರಾಟ ಮಾಡಲಾಗಿದೆ ಎಂದು ಸಿಬಿಐ ಆರೋಪಿಸಿದೆ.

ಗುರಗ್ರಾಮ್‍ದಲ್ಲಿನ ಭೂ ಹಂಚಿಕೆಯಲ್ಲಿ ನಡೆದ ಅಕ್ರಮ ಕುರಿತು ಅಧಿಕಾರಿಗಳು ಈ ದಾಳಿಗೆ ಮುಂದಾಗಿದ್ದಾರೆ.