ಬೆಂಗಳೂರು(ಜ.19): ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ರಾಷ್ಟ್ರಪತಿ ಮತ್ತು ಪ್ರಧಾನಿಯವರನ್ನು ಖುದ್ದಾಗಿ ಭೇಟಿ ಮಾಡಿ ಮಾತನಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು
ತಿಳಿಸಿದ್ದಾರೆ

ನಗರದ ಕಿದ್ವಾಯಿ ಆಸ್ಪತ್ರೆಯಲ್ಲಿ ಬೋನ್ ಮ್ಯಾರೋ ಟ್ರಾಪ್ಲಾಂಟ್(ಅಸ್ಥಿಮಜ್ಜೆ) ಘಟಕದ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪ್ರಶಸ್ತಿ ನೀಡಬೇಕು. ಈಗಾಗಲೇ ಹಲವು ಬಾರಿ ಭಾರತ ರತ್ನ ಪ್ರಶಸ್ತಿಗೆ ಮನವಿ ಮಾಡಿ ಕೇಂದ್ರ ಸರ್ಕಾರಕ್ಕೆ ಪತ್ರಗಳನ್ನು ಬರೆಯಲಾಗಿದೆ. ಎಂದು ಹೇಳಿದ್ದಾರೆ.