ರಾಯಚೂರು(ಜೂನ್.27) ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕರೇಗುಡ್ಡ ಗ್ರಾಮಕ್ಕೆ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಮಾತನಾಡಿದರು.

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿ 3 ಸಾವಿರ ಕೋಟಿ ರೂ. ವೆಚ್ಚದ ವಿವಿಧ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಸಿಎಂ ಕುಮಾರಸ್ವಾಮಿ ಅವರು ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿವೃದ್ಧಿ ವಿಷಯದಲ್ಲಿ ನಮ್ಮ ಸರಕಾರ ಹಿಂಜರಿಯುವ ಯಾವುದೇ ಪ್ರಶ್ನೆಯೇ ಇಲ್ಲ. ಅಭಿವೃದ್ಧಿಗೆ ನಮ್ಮಲ್ಲಿ ದುಡ್ಡಿನ ಕೊರತೆ ಯಾವತ್ತೂ ಇಲ್ಲ ಸಣ್ಣ ಮತ್ತು ಬೃಹತ್ ‌ನೀರಾವರಿಗೆ ಈ ವರ್ಷ 19 ಸಾವಿರ ಕೋಟಿ ರೂ. ಒದಗಿಸಲಾಗಿದೆ ಎಂದು ನುಡಿದರು. ಈ ಸಂದರ್ಭದಲ್ಲಿ ಸಚಿವರಾದ ಸಾ.ರಾ.ಮಹೇಶ್, ವೆಂಕಟರಾವ ನಾಡಗೌಡ, ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.