ನವದೆಹಲಿ (ಡಿ :೨೭): ರಾಜ್ಯವನ್ನು ಕಾಡುತ್ತಿರುವ ಬರಕ್ಕೆ ಪರಿಹಾರ ಕೇಳಲು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಪ್ರಧಾನ ಮಂತ್ರಿ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ .
ಅದಲ್ಲದೇ ಕೇಂದ್ರ ವಿಮಾನಯಾನ ಸಚಿವ ಸುರೇಶ್ ಪ್ರಭು ಅವರನ್ನು ಭೇಟಿ ಮಾಡಿ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡುವಂತೆ ಕೋರಿ ಮನವಿ ಸಲ್ಲಿಸಲಿದ್ದಾರೆ .