ಯಾದಗಿರಿ(ಜೂನ್.22) ಸಿಎಂ ಕುಮಾರಸ್ವಾಮಿಯವರು ಎರಡು ದಿನಗಳ ಗ್ರಾಮ ವಾಸ್ತವ್ಯದ ಮೊದಲ ದಿನ ಯಾದಗಿರಿ ಜಿಲ್ಲೆಯ ಚಂಡರಕಿ ಗ್ರಾಮದಲ್ಲಿ ಯಶಸ್ವಿಯಾಗಿ ನೆರವೇರಿದ್ದು, ಎರಡನೇ ದಿನದ ಕಲಬುರಗಿ ಜಿಲ್ಲೆಯ ಗ್ರಾಮ ವಾಸ್ತವ್ಯ ಮಳೆಯಿಂದಾಗಿ ರದ್ದಾಗಿದೆ.

ನಿನ್ನೆ ಸಂಜೆ ಮತ್ತು ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯ ಹೇರೂರು ಬಿ ಗ್ರಾಮದಲ್ಲಿ ನಡೆಯಬೇಕಿದ್ದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯವನ್ನು ಅನಿವಾರ್ಯ ಕಾರಣಗಳಿಂದಾಗಿ ಜುಲೈ ತಿಂಗಳಿಗೆ ಮುಂದೂಡಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವರು ಆಗಿರುವ ಪ್ರಿಯಾಂಕ ಖರ್ಗೆ ಹಾಗೂ ಅಲ್ಲಿನ ಜಿಲ್ಲಾಧಿಕಾರಿ ವೆಂಕಟೇಶ ಅವರೊಂದಿಗೆ ನಿನ್ನೆ ಮಧ್ಯರಾತ್ರಿಯವರೆಗೆ ಕಾರ್ಯಕ್ರಮದ ಬಗ್ಗೆ ಚರ್ಚಿಸಿ ಅಂತಿಮವಾಗಿ ಸಿಎಂ ಗ್ರಾಮ ವಾಸ್ತವ್ಯವನ್ನು ಮುಂದೂಡಲಾಯಿತು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಿಎಂ ಕುಮಾರಸ್ವಾಮಿಯವರು ಮಳೆಯಿಂದಾಗಿ ರೈತರು ಕೃಷಿ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಿದೆ. ಬರುವ ತಿಂಗಳಿನಲ್ಲಿ ವಿಧಾನಮಂಡಲದ ದಿನಾಂಕವನ್ನು ನೋಡಿಕೊಂದು ಜನತಾದರ್ಶನ ಕಾರ್ಯಕ್ರಮದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ನುಡಿದರು.