ಬೆಂಗಳೂರು(ಜೂನ್.12) ರೈತರು ವಾಣಿಜ್ಯ ಬ್ಯಾಂಕುಗಳಲ್ಲಿ ಮಾಡಿರುವಂತಹ ಬೆಳೆಸಾಲ ಮನ್ನಾ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸಕಾರವು ವಾಣಿಜ್ಯ ಬ್ಯಾಂಕುಗಳ ಬೆಳೆಸಾಲವನ್ನು ಒಂದೇ ಕಂತಿನಲ್ಲಿ ಮನ್ನಾ ಮಾಡುವುದಾಗಿ ಮಹತ್ವದ ಆದೇಶವನ್ನು ನೀಡಿದೆ.

ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲಗಳು, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲಗಳು ಮತ್ತು ಪ್ರೋತ್ಸಾಹ ಧನಕ್ಕೆ ಅರ್ಹತೆ ಹೊಂದಿರುವ ಸಾಲಗಳಿಗೆ ಈಗಾಗಲೇ ಬಿಡುಗಡೆಯಾಗಿರುವಂತಹ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡುವ ಮೂಲಕ ಸರ್ಕಾರ ಮಹತ್ವಪೂರ್ಣ ಆದೇಶ ಹೊರಡಿಸಿದೆ.

NPA ಸಾಲ ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸಿವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿದೆ.

ಸಾಲಮನ್ನಾ ಆಗಿರುವ ಬಗ್ಗೆ ದೃಢೀಕರಣ ಪತ್ರವನ್ನು ಎಲ್ಲಾ ಫಲಾನುಭವಿಗಳಿಗೆ ಬಿಡುಗಡೆ ಮಾಡುವುದಾಗಿ ಸರ್ಕಾರ ತಿಳಿಸಿದೆ.