ಬೆಂಗಳೂರು:(ಜೂನ್.07): ಮಾಜಿ ಸಚಿವ ರೋಷನ್ ಬೇಗ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಿರಿಯ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ನೀಡುವ ಮೂಲಕ ಪಕ್ಷದ ವಿರುದ್ಧ ಕೆಲಸ ಮಾಡುತ್ತಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕಮಾಂಡ್‍ಗೆ ದೂರು ಕೊಟ್ಟಿದ್ದಾರೆ.

ರೋಷನ್‍ಬೇಗ್ ಹೇಳಿಕೆ ಪಕ್ಷದ ಘನತೆಯನ್ನು ಕುಗ್ಗಿಸುವಂತಹ ಕೆಲಸ ಮಾಡಲಾಗುತ್ತಿದೆ. ಈ ಹಿಂದೆ ಲೋಕಸಭಾ ಚುನಾವಣೆಯ ವೇಳೆಯೂ ಪಕ್ಷದ ನಾಯಕರ ಬಗ್ಗೆ ರೋಷನ್ ಬೇಗ್ ಕಿಡಿಕಾಯ್ದಿದ್ದರು, ಇದರಿಂದ ಅವರು ಹೇಳಿರುವ ಹೇಳಿಕೆಗಳನ್ನು ಸಂಗ್ರಹಿಸಿ ಹೈಕಮಾಂಡ್‍ಗೆ ಕಳುಹಿಸಲಾಗಿದೆ.

ಈ ವಿಚಾರದ ಕುರಿತು ಹೈಕಮಾಂಡ್ ಸೂಕ್ತ ಕ್ರಮವನ್ನು ಒದಗಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮನವಿ ಮಾಡಿದ್ದಾರೆ.