ಬೆಂಗಳೂರು(ಮಾ:20): ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡಿರುವ ನಿರ್ಮಾಪಕ ರಾಕಲೈನ್ ವೆಂಕಟೇಶ್ ವಿರುದ್ಧ ನಿರ್ದೇಶಕ ಹಾಗೂ ನಿರ್ಮಾಪಕ ಟೇಶಿ ವೆಂಕಟೇಶ್ ದೂರು ನೀಡಿದ್ದಾರೆ.

ಸುಮಲತಾ ಅಂಬರೀಶ್ ಅವರಿಗೆ ಚಿತ್ರರಂಗವೇ ಬೆಂಬಲ ನೀಡುತ್ತದೆ ಎಂದು ರಾಕ್ ಲೈನ್ ವೆಂಕಟೇಶ್ ಏಕಪಕ್ಷೀಯವಾಗಿ ಘೋಷಿಸಿದ್ದಾರೆ. ಯಾರ ಅಭಿಪ್ರಾಯವನ್ನು ಅವರು ಪಡೆದಿಲ್ಲ ಎಂದು ಟೇಶಿ ವೆಂಕಟೇಶ್ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ.

ಮನವಿ ಸ್ವೀಕರಿಸಿದ ಫಿಲಂ ಚೇಂಬರ್ ಅಧ್ಯಕ್ಷ ಚಿನ್ನೇಗೌಡ ಅವರು, ಮಾರ್ಚ್ 29 ರಂದು ಕಾರ್ಯಕಾರಣಿ ಸಭೆಯಲ್ಲಿ ಈ ವಿಚಾರದ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.