ಬಳ್ಳಾರಿ(ಮಾ:15): ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೆರಡು ದಿನಗಳಲ್ಲಿ ಪ್ರಕಟವಾಗುತ್ತದೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಆದರೆ ಆ ಪಟ್ಟಿಯಲ್ಲಿ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯ ಹೆಸರಿರುವುದಿಲ್ಲ ಎಂದು ತಿಳಿಸಿದ್ದಾರೆ. ಬಳ್ಳಾರಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಉಗ್ರಪ್ಪ ವಿರುದ್ಧ ಸ್ಪರ್ಧಿಸಿ ಸೋಲನ್ನನುಭವಿಸಿದ್ದ ಶ್ರೀರಾಮುಲು ಅವರ ಸಹೋದರಿ ಶಾಂತಾ ಅವರನ್ನೇ ಅಭ್ಯರ್ಥಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಆದರೆ ಬಿಜೆಪಿಯ ಕೆಲ ಹಿರಿಯ ನಾಯಕರಿಗೆ ಅಸಮಾಧಾನ ಇರುವ ಕಾರಣ ಶಾಂತಾ ಅವರ ಬದಲಿಗೆ ಬೇರೆ ಅಭ್ಯರ್ಥಿಗಾಗಿ ಹುಡುಕಾಟ ನಡೆದಿದ್ದು,ಈ ವಿಚಾರ ಶ್ರೀರಾಮುಲು ಅವರಿಗೆ ಬೇಸರ ತಂದಿದೆ. ತಮ್ಮ ಗುರು ಎಂದು ಕರೆದುಕೊಳ್ಳುತ್ತಿದ್ದ ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಮುಖಂಡರ ಜೊತೆ ಅಸಮಾಧಾನಗೊಂಡಿದ್ದಾರೆ.