ಬೆಂಗಳೂರು(ಜ:16): ದೋಸ್ತಿ ಸರ್ಕಾರದ ಸಚಿವ ಸಂಪುಟ ಪುನರ್ ರಚನೆ ಆದ ಬಳಿಕ ಸಚಿವ ಸ್ಥಾನ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ ಸದ್ಯದ್ಲಲೇ ಬಿಜೆಪಿಗೆ ಸೇರಲಿದ್ದಾರೆ ಎನ್ನುವ ಮಾತು ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಆದರೆ ಇದೀಗ ಕಾಂಗ್ರೆಸ್ ಹೈಕಮಾಂಡ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಿದೆ.

ನಿಮ್ಮನ್ನು ಮಂತ್ರಿ ಸ್ಥಾನದಿಂದ ಕೈಬಿಟ್ಟಿದ್ದು ಸರಿಯಲ್ಲ,ಮತ್ತೆ ನಿಮಗೆ ಮಂತ್ರಿ ಸ್ಥಾನ ನೀಡುತ್ತೇವೆ. ಪಕ್ಷ ಬಿಡುವುದು ನಿಮ್ಮ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ,ತಕ್ಷಣ ಅಲ್ಲಿಂದ ಹೊರಟು ಬನ್ನಿ,ಕುಳಿತು ಮಾತಾಡೋಣ ಎಂದು ಕೆ.ಸಿ ವೇಣುಗೋಪಾಲ್ ಅವರು ಬುದ್ದಿ ಹೇಳಿದ್ದಾರೆ ಎನ್ನಲಾಗಿದೆ.