ಮಂಡ್ಯ(ಜೂ:28): ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ತಹಸೀಲ್ದಾರ್ ಶಿವಮೂರ್ತಿ ಅವರ ವಿರುದ್ಧ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಡಪ್ರಭು ಕೆಂಪೇಗೌಡ ಜಯಂತಿಯ ಕಾರ್ಯಕ್ರಮಕ್ಕೆ ಸಂಸದೆ ಸುಮಲತಾ ಅವರಿಗೆ ಆಹ್ವಾನಿಸದೇ ಇದ್ದ ಕಾರಣ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಕೆಂಪೇಗೌಡ ಜಯಂತಿಯ ಆಹ್ವಾನ ಪತ್ರಿಕೆಯಲ್ಲಿ ಸುಮಲತಾ ಅವರ ಹೆಸರನ್ನು ಕೈ ಬಿಟ್ಟು ಕಾರ್ಯಕ್ರಮಕ್ಕೆ ಆಹ್ವಾನಿಸದೇ ಸಂಸದರಿಗೆ ತಹಶೀಲ್ದಾರ್ ಅವಮಾನ ಮಾಡಿದ್ದಾರೆ ಎಂಬುದು ಕಾಂಗ್ರೆಸ್ ಮುಖಂಡರ ಮುತ್ತಿಗೆಗೆ ಕಾರಣವಾಗಿದೆ ಎಂದು ತಿಳಿದುಬಂದಿದೆ.

ಪ್ರತಿಭಟನಾಕಾರರು ತಹಶೀಲ್ದಾರ್ ವರ್ಗಾವಣೆಗೆ ಒತ್ತಾಯ ಮಾಡಿದ್ದು, ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಡಿಸಿ ಗೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ, ಪ್ರತಿಭಟನೆಗೆ ಹೆದರಿದ ತಹಶೀಲ್ದಾರ್ ಮುಖಂಡರಲ್ಲಿ ಕ್ಷಮೆಯಾಚಿಸಿದ್ದಾರೆ.