ಬೆಂಗಳೂರು(ಮೇ. 30) ರಾಜ್ಯದಲ್ಲಿ ಮೈತ್ರಿ ಸರ್ಕಾರವು ಹೀನಾಯವಾಗಿ ಸೋಲು ಅನುಭವಿಸಿರಬಹುದು ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ರಚನೆಯಲ್ಲಿ ಕಾಂಗ್ರೆಸ್ ,ಹಾಗೂ ಜೆ ಡಿ ಎಸ್ ಪಕ್ಷಗಳು ಆಸಕ್ತಿಯಿಂದ ಮಾಡಿವೆ ಎಂದು ಸಿದ್ದರಾಮಯ್ಯ ನುಡಿದಿದ್ದಾರೆ.

ಮೈತ್ರಿ ಸರ್ಕಾರದ ಶಾಸಕರಲ್ಲಿ ಸಾಕಷ್ಟು ಗೊಂದಲಗಳಿದ್ದು, ಕಾಂಗ್ರೆಸ್ ನ ಶಾಸಕರು ಬಿಜೆಪಿಗೆ ಸೇರ್ಪಡೆಯಾಗುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ .ಇದೆ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಪರಮೇಶ್ವರ್ ಮನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದಿಂದ ಸಭೆಯನ್ನು ನಡೆಸಲಾಗಿತ್ತು. ಈ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯನವರು, ಕೋಮುವಾದಿ ಶಕ್ತಿ ಅಧಿಕಾರಕ್ಕೆ ಬಂದ್ರೆ ಜನರಿಗೆ ತೊಂದರೆಯಾಗುತ್ತದೆ.

ಕೋಮುವಾದಿ ಶಕ್ತಿ ಅಧಿಕಾರಕ್ಕೆ ಬರದಂತೆ ಕಾಂಗ್ರೆಸ್ ಜೆಡಿಎಸ್ ಸೇರಿ ಸಂವಿಧಾನಬದ್ದವಾಗಿಯೇ ದೋಸ್ತಿ ಸರ್ಕಾರ ರಚನೆ ಮಾಡುತ್ತಿದ್ದೇವೆ. ನಮ್ಮ ಶಾಸಕರು ಯಾವುದೇ ಕಾರಣಕ್ಕೆ ಬಿಜೆಪಿಗೆ ಹೋಗುವುದಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿರುತ್ತೆ ಮತ್ತು ಸ್ಥಿರವಾಗಿರುತ್ತೆ ಎಂದು ಸಿದ್ದು ನುಡಿದಿದ್ದಾರೆ.