ಬೆಂಗಳೂರು(ಜೂ :10): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಕಾರ್ನಾಡ್ ಅವರು ವಿಧಿವಶರಾಗಿರುವ ಕಾರಣ ಕರ್ನಾಟಕ ಸರ್ಕಾರದ ಸಚಿವಾಲಯ ಅಧಿಕೃತ ಘೋಷಣೆ ನೀಡಿದೆ.

ದಿವಂಗತರ ಗೌರವಾರ್ಥವಾಗಿ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಕಚೇರಿಗಳಿಗೆ ದಿನಾಂಕ:10/06/2019 ರ ಸೋಮವಾರದಂದು ರಜೆ ಘೋಷಿಸಲಾಗಿದೆ, ಅಷ್ಟೇ ಅಲ್ಲದೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕರಣೆ ಆಚರಿಸಲಾಗುವುದು, ಈ ಅವಧಿಯಲ್ಲಿ ಅಧಿಕೃತ ಮನೋರಂಜನಾ ಕಾರ್ಯಕ್ರಮಗಳು ಇರುವುದಿಲ್ಲ,ಹಾಗೂ ನಿಯತವಾಗಿ ರಾಷ್ಟ್ರ ಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲಾಗುವುದು.

ಈ ಆದೇಶವನ್ನು ನೆಗೋಷಿಯೇಬಲ್ ಇನ್ಸ್ಟ್ರುಮೆಂಟ್ ಆಕ್ಟ್ 1881ರ ಪ್ರಕಾರವೂ ಕೂಡ ಸಾರ್ವಜನಿಕ ರಜೆಯೆಂದು ಘೋಷಿಸಿದೆ, ಅಷ್ಟೇ ಅಲ್ಲದೆ ಮೃತರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.