ಬೆಳಗಾವಿ(ಮೇ.30) ಶಿವು ಉಪ್ಪಾರ್ ಎಂಬ ಹುಡುಗ ಬೆಳಗಾವಿ ಜಿಲ್ಲೆಯ ಗೋಕಾಕ್ ಬಸ್ ನಿಲ್ದಾಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಅನುಮಾನ ಮೂಡಿಸಿದೆ.

ಶಿವು ಉಪ್ಪಾರ್ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ಅಲ್ಲವೆಂದು ಸಾಮಾಜಿಕ ಜಾಲತಾಣದಲ್ಲಿ ಶಿವು ಉಪ್ಪಾರ್ ವಿಡಿಯೋ ನೋಡಿದರೆ ಗೊತ್ತಾಗುತ್ತದೆ. ಗೋರಕ್ಷಣೆ ಹೋರಾಟ ಮಾಡುತ್ತಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವಿಲ್ಲ. ಆದ್ದರಿಂದ ಸಾವಿನ ಪ್ರಕರಣವನ್ನು ಸೂಕ್ತ ತನಿಖೆಯನ್ನು ನಡೆಸಬೇಕು ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಮನವಿಯನ್ನು ಸಲ್ಲಿಸಿದರು.

ಕಲ್ಲೊಳಿಯ ಕೈವಾಲ್ಯಾನಂದ ಸ್ವಾಮೀಜಿ, ಪಿ.ಬಿ,ಆದರ್ಶ, ಭಾವಕಣ್ಣ ಲೋಹಾರ, ಸತೀಶ್ ಮಾಳವದೆ, ಮಹಾಂತೇಶ ವಿ, ವಿಶ್ವನಾಥ ಚವ್ಹಾಣ್ ಮತ್ತಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.