ಬೆಂಗಳೂರು(ಜೂನ್.14) ಸರ್ಕಾರ ಜಿಂದಾಲ್ ಗೆ ಕಂಪನಿಗೆ ಭೂಮಿಯನ್ನು ಮಾರಾಟ ಮಾಡುವುದನ್ನು ವಿರೋಧಿನಿ 2 ದಿನಗಳ ಅಹೋರಾತ್ರಿ ಧರಣಿಯನ್ನು ನಡೆಸುತ್ತಿದ್ದರೆ, ಇನ್ನೊಂದೆಡೆ ಜಿಂದಾಲ್ ಭೂಮಿ ನೀಡುವುದನ್ನು ಕಾಂಗ್ರೆಸ್ ಸಚಿವ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು ಜಿಂದಾಲ್ ಕಂಪನಿಗೆ ಭೂಮಿ ಕೊಡುವುದನ್ನು ನಾನು ಬೆಂಬಲಿಸುತ್ತೇನೆ. ಏಕೆಂದರೆ ಕಂಪನಿಗಳಿಗೆ ಭೂಮಿಯನ್ನು ಕೊಡುವುದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ. ಬಂಡವಾಳ ಹೂಡೋದು ಕಂಪನಿಗಳು, ಉದ್ಯಮಿಗಳು. ಅವರೇ ಜಿಎಸ್ ಟಿ ಕಟ್ಟುತ್ತಾರೆ ಮತ್ತು ಇತರ ನಿಯಮಗಳನ್ನು ಪಾಲಿಸುತ್ತಾರೆ.

ಬಿಜೆಪಿ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು, ಬಿಜೆಪಿಯವರು ಈ ಮೋದಲೇ ಪ್ರತಿಭಟನೆಯನ್ನು ನಡೆಸಬೇಕಿತ್ತು, ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರಕ್ಕೆ ಪೌಂಡೇಷನ್ ಹಾಕಿದವರೇ ಯಡಿಯೂರಪ್ಪ, ಸದಾನಂದಗೌಡ ಮತ್ತು ಜಗದೀಶ್ ಶೆಟ್ಟರ್ ರವರು. ಬೇಕಿದ್ದರೆ ದಾಖಲೆಗಳನ್ನು ತೆಗೆದು ನೋಡಲಿ ಎಂದು ಹೇಳಿದ್ದಾರೆ.