ಕನಕಪುರ(ಸೆ:04): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಸಿದವರ ಪೈಕಿ 15 ಮಂದಿ ವಿರುದ್ಧ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದಂತೆ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಒಟ್ಟು 15 ಕ್ಕೂ ಹೆಚ್ಚು ಜನರ ಮೇಲೆ ಎಫ್‍ಐಆರ್ ಹಾಕಲಾಗಿದೆ.

ಪ್ರತಿಭಟನೆ ವೇಳೆ ಸಾರ್ವಜನಿಕರ ಆಸ್ತಿ-ಪಾಸ್ತಿ ಹಾನಿ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕ್ರಮ ತೆಗೆದುಕೊಂಡಿದ್ದಾರೆ. ಕನಕಪುರದಲ್ಲಿ ಎಸ್‍ಪಿ ಅನೂಪ್ ಶೆಟ್ಟಿ ಮೊಕ್ಕಾಂ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ನಗರದಲ್ಲಿ ಅಹಿತಕರ ಘಟನೆಗಳು ನಡೆಯಬಾರದು ಎಂದು ಸ್ವತಃ ಎಸ್‍ಪಿ ಅವರೇ ನಗರದ ಬೀದಿ ಬೀದಿಗಳಲ್ಲಿ ರೌಂಡ್ಸ್ ಹಾಕುತ್ತಿದ್ದಾರೆ. ದೆಹಲಿಯ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ಪ್ರಕರಣದ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್​ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಸಂಜೆ ಬಂಧಿಸಿದರು.ಕಳೆದ ನಾಲ್ಕು ದಿನಗಳಿಂದ ನವದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ಡಿಕೆ ಶಿವಕುಮಾರ್​ ಅವರು ವಿಚಾರಣೆಗೆ ಹಾಜರಾಗಿದ್ದರು. ಆದರೆ, ವಿಚಾರಣೆಗೆ ಡಿಕೆಶಿ ಸರಿಯಾಗಿ ಸಹಕರಿಸಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ಅವರನ್ನು ಬಂಧಿಸಿದ್ದಾರೆ.

ಇ.ಡಿ. ಕಚೇರಿ ಮುಂದೆ ಡಿಕೆಶಿ ಬೆಂಬಲಿಗರು, ಕಾಂಗ್ರೆಸ್​ ಕಾರ್ಯಕರ್ತರ ಜಮಾಯಿಸುತ್ತಿರುವುದರಿಂದ ಕಚೇರಿಗೆ ಹೆಚ್ಚುವರಿ ಭದ್ರತೆಯನ್ನು ಒದಗಿಸಲಾಗಿದೆದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್​ ಅವರಿಗೆ ಸೇರಿದ ಫ್ಲಾಟ್​ಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಡಿ.ಕೆ. ಶಿವಕುಮಾರ್ ನಿವಾಸದಲ್ಲಿ ಅಕ್ರಮ ಹಣ ಪತ್ತೆಯಾಗಿತ್ತು.ಡಿಕೆಶಿ ಹಾಗೂ ಆಪ್ತರ ಮನೆಗಳಲ್ಲಿ ಐಟಿ ಅಧಿಕಾರಿಗಳು 8.59 ಕೋಟಿ ಹಣ ಜಪ್ತಿ ಮಾಡಿದ್ದರು. ಇಡಿ ಸಮನ್ಸ್ ರದ್ದು ಕೋರಿ ಸಚಿವ ಡಿಕೆಶಿ ಹಾಗೂ ಆಪ್ತರು ಅರ್ಜಿ ಸಲ್ಲಿಸಿದ್ದರು. ಆಗಸ್ಟ್ 28 ಕ್ಕೆ ಆದೇಶ ಪ್ರಕಟಿಸುವುದಾಗಿ ಹೈಕೋರ್ಟ್ ತಿಳಿಸಿತ್ತು. ಹಣದ ಮೂಲದ ಬಗ್ಗೆ ವಿವರಣೆ ನೀಡುವಂತೆ ಡಿಕೆಶಿ ಮತ್ತು ಆಪ್ತರಿಗೆ ಇಡಿ ಸಮನ್ಸ್ ನೀಡಿತ್ತುದೆಹಲಿಯ ನಿವಾಸದಲ್ಲಿ ಪತ್ತೆಯಾದ 8.6 ಕೋಟಿ ಪ್ರಕರಣದ ಸಂಬಂಧ ಮಾಜಿ ಸಚಿವ, ಕಾಂಗ್ರೆಸ್​ ಪ್ರಬಲ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಸಂಜೆ ಬಂಧಿಸಿದರು.