ಪಟನಾ(ಫೆ.04): ದೇಶದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪಕ್ಷಗಳು ಗೆಲುವಿನ ಕಸರತ್ತು ನಡೆಸುತ್ತಿದ್ದು, ಜನರನ್ನು ತಮ್ಮತ್ತ ಸೆಳೆಯಲು ಹಲವಾರು ಯೋಜನೆಗಳನ್ನು ಜಾರಿಗೊಲಿಸುವ ಭರವಸೆಗಳನ್ನು ನೀಡುತ್ತಿವೆ.

ಹಾಗೇಯೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಎಲ್ಲಾ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ರ್ಯಾಲಿಯನ್ನುದ್ದೇಶಿಸಿ ಭಾನುವಾರ ಮಾತನಾಡಿದ ರಾಹುಲ್, 2019 ರ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ, ರೈತರ ಸಾಲ ಮನ್ನಾದ ಜೊತೆ, ಆಹಾರ ಸಂಸ್ಕರಣೆ ಉದ್ಯಮಗಳಿಗೂ ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಇನ್ನು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸರ್ಕಾರ ಭ್ರಷ್ಟರಿಗೆ ಕೋಟ್ಯಂತರ ರು. ನೀಡುತ್ತದೆ ಎಂದು ಆರೋಪಿಸಿದ್ದಾರೆ.