ಢಾಕಾ:(ಫೆ21): ಬಾಂಗ್ಲಾ ದೇಶದ ರಾಜಧಾನಿ ಢಾಕಾದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 69 ಜನ ಸಜೀವ ದಹನವಾಗಿದ್ದಾರೆಂದು ತಿಳಿದು ಬಂದಿದೆ ಇನ್ನೂ ಹಲವರ ಸ್ಥಿತಿ ಗಂಭೀರವಾಗಿದೆ.

ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ 4 ಅಂತಸ್ಥಿನ ಕಟ್ಟಡದಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ತಗುಲಿದ ಕಟ್ಟಡದಲ್ಲಿ ರಾಸಾಯನಿಕ ವಸ್ತುಗಳನ್ನು ಸಂಗ್ರಹಿಸಿಡಲಾಗಿದ್ದು, ಅಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ದೊಡ್ಡ ಮಟ್ಟದಲ್ಲಿ ಬೆಂಕಿ ಹೊತ್ತಿ ಉರಿದಿದೆ.

ಈ ವೇಳೆ ಬೆಂಕಿ ಅಕ್ಕಪಕ್ಕದಲ್ಲಿರುವ ಕಟ್ಟಡಗಳಿಗೂ ತಗುಲಿದ್ದು, ಬೆಂಕಿಯನ್ನು ಆರಿಸಲು ಅಗ್ನಿಶಾಮಕ ಸಿಬ್ಬಂದಿಯವರು ಸ್ಥಳಕ್ಕೆ ದಾವಿಸಿದ್ದು, ರಕ್ಷಣಾ ಕಾರ್ಯವನ್ನು ಮುಂದುವರೆಸಿದ್ದಾರೆ. ಈ ಘಟನೆಯಲ್ಲಿ 69 ಜನರು ಸಜೀವ ದಹನವಾಗಿದ್ದು, ಇನ್ನು ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಹಾಗೆಯೇ ಹಲವಾರು ಮಂದಿ ಈ ದುರಂತದಲ್ಲಿ ಸಿಲುಕ್ಕಿದ್ದು ಅವರನ್ನು ಶೋಧಿಸುವ ಕಾರ್ಯ ಮುಂದುವರೆದಿದೆ.