ಬೆಂಗಳೂರು(ಮಾ:20): ಲೋಕಸಭಾ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂಬ ಗೊಂದಲದಲ್ಲಿರುವ ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡ ಅವರಿಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಮನಸ್ಸಿದ್ದರೂ ಕ್ಷೇತ್ರದ ಆಯ್ಕೆ ಇನ್ನೂ ನಿರ್ಧಾರವಾಗಿಲ್ಲ ಎಂದು ದೇವೇಗೌಡರು ಹೇಳಿಕೆ ನೀಡಿದ್ದರು. ಹೀಗಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದಲೇ ದೇವೇಗೌಡರು ಸ್ಪರ್ಧಿಸಬೇಕೆಂಬುದು ಕಾಂಗ್ರೆಸ್ ನಾಯಕರ ಬಯಕೆಯಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಸಚಿವ ಜಮೀರ್ ಅಹಮದ್ ಖಾನ್ ಅವರು ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿನೀಡಿ ಕ್ಷೇತ್ರದ ಪರಿಸ್ಥಿತಿ,ಉಭಯ ಪಕ್ಷಗಳ ಶಕ್ತಿ ಸಾಮರ್ಥ್ಯಗಳ ಬಗ್ಗೆ ಚರ್ಚೆ ನಡೆಸಿದರು.