ಬೆಂಗಳೂರು(ಜೂ,17): ಭೀಕರ ಅಪಘಾತಕ್ಕೆ ನಾಲ್ವರು ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಬಳಿ ನಡೆದಿದೆ.

ರಸ್ತೆಯಲ್ಲಿದ್ದ ಗುಂಡಿಯನ್ನು ತಪ್ಪಿಸಲು ಹೋಗಿ ಈ ದುರಂತ ನಡೆದಿದ್ದಿ, ಭೀಕರ ಅಪಘಾತಕ್ಕೆ ಆಟೋದಲ್ಲಿದ್ದ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ.

ಇನ್ನು ಅಪಘಾತದಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ, ಮೃತದೇಹಗಳನ್ನು ದೇವನಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.