ಪ್ಯಾರಿಸ್(ಮಾ:15): ಪಾಕಿಸ್ತಾನದಲ್ಲಿ ಬೀಡುಬಿಟ್ಟಿರುವ ಭಯೋತ್ಪಾದಕ ಸಂಘಟನೆಯ ಮುಖಂಡ ಮಸೂದ್ ಅಝರ್ ಗೆ ಸಂಬಂಧಪಟ್ಟ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಫ್ರಾನ್ಸ್ ಸರ್ಕಾರ ತಿಳಿಸಿದೆ. ಫ್ರಾನ್ಸ್ ನ ಆಂತರಿಕ ಸಚಿವಾಲಯ ಮತ್ತು ವಿದೇಶಾಂಗ ಸಚಿವಾಲಯ ಜಂಟಿಯಾಗಿ ನೀಡಿರುವ ಹೇಳಿಕೆಯಲ್ಲಿ ಈ ವಿಚಾರ ಪ್ರಸ್ತಾಪನೆಯಾಗಿದೆ.

ಭಯೋತ್ಪಾದನೆಯಲ್ಲಿ ನಿರತರಾಗಿರುವ ಶಂಕಿತ ಉಗ್ರರ ಯೂರೋಪಿಯನ್ ಯೂನಿಯನ್ ಪಟ್ಟಿಯಲ್ಲಿ ಮಸೂದ್ ಅಝರ್ ಹೆಸರನ್ನು ಸೇರಿಸಲಾಗುವುದು ಎಂದಿವೆ. ಮಸೂದ್ ಅಝರ್ ನನ್ನು ಜಾಗತಿಕ ಭಯೋತ್ಪಾದಕ ಜಾಗತಿಕ ಭಯೋತ್ಪಾದಕ ಎಂದು ಘೋಷಿಸಬೇಕೆಂದು ವಿಶ್ವಸಂಸ್ಥೆಯ ಭದ್ರತಾ ಸಮಿತಿಯ ಪ್ರಸ್ತಾವನೆಯನ್ನು ಚೀನಾ ವಿರೋಧಿಸಿದ ಮರುದಿನವೇ ಫ್ರಾನ್ಸ್,ಪಾಕಿಸ್ತಾನದಲ್ಲಿ ಅವಿತುಕೊಂಡಿರುವ ಉಗ್ರ ಮಸೂದ್ ಅಝರ್ ನ ಆಸ್ತಿಯನ್ನು ಮುಟ್ಟುಗೋಲು ಹಾಕಲು ನಿರ್ಧರಿಸಿದೆ.