ಬೆಂಗಳೂರು:(ಜ29): ಸಿಟಿ ವಿದ್ಯಾರ್ಥಿಗಳಿಗೆ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ. ಪರೀಕ್ಷಾ ದಾಖಲಾತಿ ಶುಲ್ಕದಲ್ಲಿ ರಿಯಾತಿಯನ್ನು ನೀಡಲಾಗಿದೆ.

ನಿನ್ನೆ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿಯ ಸಭೆಯಲ್ಲಿ, ಉನ್ನತ ಶಿಕ್ಷಣ ಸಚಿವರಾದ ಜಿ.ಟಿ. ದೇವೇಗೌಡರ ನೇತೃತ್ವದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿಯರಿಗೆ ಹಾಗೂ ಎಸ್‍ಸಿ/ಎಸ್‍ಟಿ ಅಭ್ಯರ್ಥಿಗಳಿಗೆ ಕಳೆದ ವರ್ಷದ ಶುಲ್ಕಕ್ಕಿಂತ ಶೇಕಡಾ 50 ರಷ್ಟು ಕಡಿಮೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೂ ಕಳೆದ ವರ್ಷಕ್ಕಿಂತ ಈ ಬಾರಿಯ ಶುಲ್ಕದ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ. ಇದು ಈ ಬಾರಿ ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಆಗಿದೆ.