ಪಾವಗಡ(ಜೂ,11): ಪತ್ರಕರ್ತರ ಸಮಸ್ಯೆ ಬಗ್ಗೆ ಅರಿವಿದೆ. ಕಾರ್ಮಿಕ ಇಲಾಖೆ ವ್ಯಾಪ್ತಿಯಡಿ ಸೌಲಭ್ಯ ಕಲ್ಪಿಸುವ ವಿಚಾರ ಸಂಬಂಧ ಅಧಿಕಾರಗಳೊಂದಿಗೆ ಚರ್ಚಿಸಿ ತಿರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಕಾರ್ಮಿಕ ಸಚಿವ ವೆಂಕಟರಮಣಪ್ಪ ಹೇಳಿದ್ದಾರೆ.

ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶ ಸೇರಿದಂತೆ ಪತ್ರಕರ್ತರಿಗೆ ಸಭೆ, ಸಮಾರಂಭ ಹಾಗೂ ಸುದ್ದಿ ಸಂಗ್ರಹ ಮಾಡಲು ಹೋಗಿ ಬರಲು ಅನುಕೂಲವಾಗುವಂತೆ 100 ಕಿ.ಮೀ ವ್ಯಾಪ್ತಿಯಲ್ಲಿ ಸಂಚರಿಸಲು ಉಚಿತ ಬಸ್ ಪಾಸ್ ವಿತರಿಸುವ ಬಗ್ಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ಚರ್ಚಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಇನ್ನು ಕಾನೂನುಬದ್ದವಾಗಿ ಪತ್ರಕರ್ತರು ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಬರುತ್ತಾರೆಯೆ ಇಲ್ಲ ಎಂಬುದರ ಬಗ್ಗೆ ಜೂನ್ 14 ರಂದು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಿ ಈ ಬಗ್ಗೆ ನಿರ್ದಾರ ತೆಗೆದುಕೊಳ್ಳಲಾಗುವುದು ಹಾಗೂ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸುವ ಬಗ್ಗೆ ಪ್ರಾಮಾಣಿಕವಾಗಿ ಚರ್ಚಿಸುತ್ತೇನೆ ಎಂದು ಹೇಳಿದ್ದಾರೆ.

ಒಟ್ಟಾರೆ ಸಚಿವರು ಪತ್ರಕರ್ತರಿಗೆ ವಿಶೇಷ ಸೌಲಭ್ಯದ ಭರವಸೆ ನೀಡಿದ್ದು, ಇದಕ್ಕೆ ಮುಖ್ಯಮಂತ್ರಿ ಸ್ಪಂದಿಸುತ್ತಾರಾ ಎಂಬುದನ್ನು ಕಾದು ನೋಡಬೇಕು.