ಬೆಂಗಳೂರು:(ಫೆ22): ಈ ಸಾರಿ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಿದೆ. ಇದು ಈ ಸಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಆಗಿದೆ.

ಮಾರ್ಚ್ 01 ರಿಂದ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲ್ಲಿದ್ದು, ಈ ವೇಳೆ ಈ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ವಿದ್ಯಾರ್ಥಿಗಳು ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷೆ ಮುಗಿದ ನಂತರ ವಾಸಸ್ಥಳಕ್ಕೆ ಹಿಂದುರುಗುವಾಗ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಈ ಉಚಿತ ಬಸ್ ವ್ಯವಸ್ಥೆಯ ಬಗ್ಗೆ ಕೆಎಸ್‍ಆರ್‍ಟಿಸಿ ನಿಗಮದಿಂದ. ಕೆಎಸ್‍ಆರ್‍ಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ. ಈ ರೀತಿ ವ್ಯವಸ್ಥೆ ಕಲ್ಪಿಸಿರುವುದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ.