ಬೆಂಗಳೂರು(ಸೆ.09) ಉದ್ಯೋಗಾಕಾಂಕ್ಷಿಗಳಿಗೆ ಬಿಬಿಎಂಪಿಯು ಭರ್ಜರಿ ಸಿಹಿಸುದ್ದಿಯನ್ನು ನೀಡಿದ್ದು, 4 ಸಾವಿರ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಘನತಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತಾಜ್ಯ ನಿರ್ವಹಣೆ ವಿಭಾಗದಲ್ಲಿ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಬಿಬಿಎಂಪಿ ಭರ್ತಿಗೊಳಿಸಿರುವ 4 ಸಾವಿರ ಹುದ್ದೆಗಳು ಗ್ರೂಪ್ ಡಿ ವೃಂದದ ಪೌರ ಕಾರ್ಮಿಕ ಹುದ್ದೆಗಳಾಗಿವೆ.

ಆಸಕ್ತಿ ಉಳ್ಳವರು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಾಗಿದ್ದು, ಶೀಘ್ರದಲ್ಲೇ ಬಿಬಿಎಂಪಿ ಅಧಿಕೃತ ವೆಬ್ ಸೈಟ್ ನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಲು ಲಿಂಕ್ ಅನ್ನು ಅಳವಡಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9 ದಿನವಾಗಿದೆ. ಹುದ್ದೆಗಳಿಗೆ ಶೈಕ್ಷಣಿಕ ವಿದ್ಯಾರ್ಹತೆಯ ಅಗತ್ಯವಿಲ್ಲ. ಕನ್ನಡ ಭಾಷೆ ಮಾತನಾಡಬೇಕು. ಕನ್ನಡ ಜ್ಞಾನದ ಬಗ್ಗೆ ಸ್ವಯಂ ಘೋಷಣೆ ಪತ್ರ ಸಲ್ಲಿಸಬೇಕು. ಗರಿಷ್ಠ ವಯೋಮಿತಿ 45 ವರ್ಷ ಮೀರಿರಬಾರದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 100, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 200 ರೂ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ. ವಿಕಲ ಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯತಿ ನೀಡಲಾಗಿದೆ.