ನವದೆಹಲಿ(ಜ:17): ಕುದುರೆ ವ್ಯಾಪಾರಕ್ಕೆ ನಿಂತಿದ್ದ ಬಿಜೆಪಿ ಗೆ ಹಿನ್ನೆಡೆಯಾಗಿದ್ದು,ರಾಜ್ಯದಲ್ಲಿ ದೋಸ್ತಿ ಸರ್ಕಾರ ಸುಭದ್ರವಾಗಿದೆ ಎಂದು ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಮಿತ್ ಷಾ ಆದೇಶದಂತೆ ನಡೆಯುತ್ತಿದ್ದ ಆಪರೇಷನ್ ಕಮಲ ಸಂಪೂರ್ಣವಾಗಿ ವಿಫಲವಾಗಿದೆ ಎಂದರು.

ಜನರು ಆಯ್ಕೆ ಮಾಡಿದ ಶಾಸಕರನ್ನು ಬಿಜೆಪಿ ಹೈಜಾಕ್ ಮಾಡುತ್ತಿದೆ,ಅವರಿಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲ,ಶಾಸಕರನ್ನು ಹೋಟೆಲ್ ನಲ್ಲಿ ಯಾಕೆ ಕೂಡಿ ಹಾಕಿದ್ದಾರೆ ಎಂದು ಪ್ರಶ್ನಿಸಿದ್ದಾರೆ.