ಬೆಂಗಳೂರು(ಆ:19): ರಾಜ್ಯ ರಾಜಕೀಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಫೋನ್ ಟ್ಯಾಪಿಂಗ್ ಕುರಿತು ಇಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಫೋನ್ ಕದ್ದಾಲಿಕೆ ಆರೋಪ ಕೇಳಿಬಂದಿತ್ತು. ಹೀಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ವಹಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಮನವಿ ಮೇರೆಗೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದರು.

ಫೋನ್ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಇಂದು ಸುದ್ದಿಗೋಷ್ಠಿ ಕರೆದಿದ್ದಾರೆ. ನಗರದ ಜೆಡಿಎಸ್ ಮುಖ್ಯ ಕಚೇರಿ ಜೆ.ಪಿ ಭವನದಲ್ಲಿ ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ ಪರ ಬ್ಯಾಟ್ ಬೀಸುವ ಸಾಧ್ಯತೆ ಇದೆ.