ಬೆಂಗಳೂರು (ಜೂನ್. ೧೪) ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು 1000 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1 ನೇ ತರಗತಿ ಆಂಗ್ಲ ಮಾಧ್ಯಮದ ವಿಭಾಗ ಹಾಗೂ 100 ಹೊಸ ಕೆ.ಪಿ.ಎಸ್. ಶಾಲೆಗಳು ಮತ್ತು ಪೂರ್ವ ಪ್ರಾಥಮಿಕ ಶಾಲೆಗಳ ಉದ್ಘಾಟನೆಯನ್ನು ನೆರವೇರಿಸಿದರು.

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ವಿಧಾನ ಪರಿಷತ್ ಮಾಜಿ ಅಧ್ಯಕ್ಷ ಬಸವರಾಜ ಹೊರಟ್ಟಿ, ಶಾಸಕರಾದ ಆರ್. ರೋಷನ್ ಬೇಗ್, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ಪಿ.ಸಿ.ಜಾಫರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.