ಮುಂಬೈ;(ಜು.02): ಈಗಾಗಲೇ ಕೆಲವು ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದ್ದು, ಜನ ಜೀವನ ಅಸ್ತವ್ಯಸ್ಥಗೊಂಡಿದೆ.

ಮಳೆರಾಯನ ಆರ್ಭಟದಿಂದಾಗಿ 20ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಇನ್ನೂ ಇಲ್ಲಿ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.

ಇಂದು ಸುರಕ್ಷತೆಯ ದೃಷ್ಟಿಯಿಂದ ಅಲ್ಲಿನ ಸರ್ಕಾರ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿದೆ. ಮನೆಯ ಗೋಡೆ ಕುಸಿದ ಪರಿಣಾಮವಾಗಿ 15 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಷ್ಟ್ರೀಯ ವಿಪತ್ತು ನಿರ್ವಾಹಣಾ ದಳದ ಸಿಬ್ಬಂದಿಗಳು ಆಗಮಿಸಿ, ರಕ್ಷಣಾ ಕಾರ್ಯಚರಣೆಯನ್ನು ಮುಂದುವರಿಸಿದ್ದು, ಇನ್ನೂ 2-3 ದಿನ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.