ದಕ್ಷಿಣ ಕನ್ನಡ(ಜುಲೈ.23) ಈ ವರ್ಷ ಮುಂಗಾರು ಚುರುಕುಗೊಳ್ಳುತ್ತಿದ್ದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಹಿನ್ನಲೆಯಲ್ಲಿ ಇಂದು ಮಂಗಳೂರು ದಕ್ಷಿಣ ಕನ್ನಡ ಭಾಗದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಮಡಿಕೇರಿ ಮಂಗಳೂರು ರಾಷ್ಟ್ರೀಯ ಹೆದ್ದಾರಿ 275ರ ಮದೆನಾಡು ಬಳಿ ಗುಡ್ಡ ಕುಸಿತಗೊಂಡಿದ್ದು, ಮಣ್ಣು ತೆರವುಗೊಳಿಸುವ ಕಾರ್ಯ ಚುರುಕುಗೊಂಡಿದೆ. ಸ್ಥಳದಲ್ಲಿ ಬೀಡು ಬಿಟ್ಟಿರುವ ಪೊಲೀಸ್ ಸಿಬ್ಬಂದಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಸರಕಾರಿ, ಅನುದಾನಿತ ಹಾಗೂ ಖಾಸಗಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜು.23ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಶಾಲಾ, ಕಾಲೇಜಿಗೆ ರಜೆ ನೀಡಲಾಗಿದೆ. ಪದವಿ ಪೂರ್ವ ಕಾಲೇಜುವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದೇ ವೇಳೆ ಆದೇಶದಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರಿಕೆ ವಹಿಸಬೇಕು, ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ತೆರಳುವಂತಿಲ್ಲ, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು, ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸಬೇಕು ಅಂತ ಮನವಿ ಮಾಡಿಕೊಂಡಿದ್ದಾರೆ.